ತ್ರಿಷಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಮನ್ಸೂರ್​ಗೆ 1 ಲಕ್ಷ ರೂ. ದಂಡ ವಿಧಿಸಿದ ಮದ್ರಾಸ್ ಕೋರ್ಟ್…

54
firstsuddi

ಹೆಸರಾಂತ ನಟಿ ತ್ರಿಷಾಗೆ ಅವಹೇಳನಕಾರಿ ಮಾತುಗಳನ್ನು ಆಡಿದ್ದಲ್ಲದೇ, ತಿಶ್ರಾ ವಿರುದ್ಧವೇ ಮಾನನಷ್ಟ ಮೊಕದ್ದಮೆ ಹೂಡಿದ್ದ ನಟ ಮನ್ಸೂರ್ ಅಲಿಖಾನ್ ಗೆ ಮದ್ರಾಸ್ ಹೈಕೋರ್ಟ್ ಒಂದು ಲಕ್ಷ ರೂಪಾಯಿ ದಂಡ ವಿಧಿಸಿದೆ.

ಮನ್ಸೂರ್ ಅವರು ಮದ್ರಾಸ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ‘ತ್ರಿಷಾ, ಚಿರಂಜೀವಿ ಹಾಗೂ ಖುಷ್ಬೂ ಅವರು ಸೋಶಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳಲ್ಲಿ ತಮ್ಮ ಮಾನಹರಣ ಮಾಡಿದ್ದಾರೆ. ಅವರ ವಿರುದ್ಧ ಮಾನನಷ್ಟ ಕೇಸ್ ದಾಖಲಿಸಲು ಒಪ್ಪಿಗೆ ನೀಡಬೇಕು’ ಎಂದು ಮನ್ಸೂರ್ ಅಲಿ ಖಾನ್ ಕೇಳಿದ್ದರು. ಡಿಸೆಂಬರ್ 11ರಂದು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಸತೀಶ್ ಕುಮಾರ್ ಅವರು, ‘ಮನ್ಸೂರ್ ಅಲಿ ಖಾನ್ ನಟಿಯ ವಿರುದ್ಧ ಕೆಟ್ಟ ಪದ ಬಳಕೆ ಮಾಡಿದ್ದಾರೆ. ನಿಜವಾಗಿ ಹೇಳಬೇಕು ಎಂದರೆ ನಟಿ ತ್ರಿಷಾ ನ್ಯಾಯಾಲಯದ ಮೆಟ್ಟಿಲೇರಬೇಕಿತ್ತು’ ಎಂದಿದ್ದರು.

ಈಗ ಕೋರ್ಟ್ ಮನ್ಸೂರ್ ಅಲಿ ಖಾನ್ ಗೆ 1 ಲಕ್ಷ ರೂಪಾಯಿ ದಂಡ ವಿಧಿಸಿದೆ. ಚೆನ್ನೈನ ಕ್ಯಾನ್ಸರ್ ಸಂಸ್ಥೆಗೆ ಈ ಹಣವನ್ನು ಡಿಪೋಸಿಟ್ ಮಾಡುವಂತೆ ಸೂಚನೆ ನೀಡಿದೆ. ತ್ರಿಷಾ ಅವರನ್ನು ಬೆಂಬಲಿಸಿರುವ ಕೋರ್ಟ್, ‘ಈ ಹೇಳಿಕೆಗೆ ಎಲ್ಲರೂ ಹೇಗೆ ಪ್ರತಿಕ್ರಿಯಿಸುತ್ತಿದ್ದರೋ ತ್ರಿಷಾ ಕೂಡ ಹಾಗೆಯೇ ಪ್ರತಿಕ್ರಿಯಿಸಿದ್ದಾರೆ’ ಎಂದು ಅಭಿಪ್ರಾಯಪಟ್ಟಿದೆ.

ಈ ಹಿಂದೆ ತ್ರಿಷಾಗೆ ಅವಹೇಳನಕಾರಿ ಮಾತುಗಳನ್ನು ಆಡಿದ್ದ ಮನ್ಸೂರ್ ಅಲಿ ಖಾನ್ ಮೇಲೆ ಲೈಂಗಿಕ ಕಿರುಕುಳ ದೂರು ದಾಖಲಾಗಿತ್ತು. ಚೆನ್ನೈನ ಥೌಸಂಡ್ ಲೈಟ್ಸ್ ಆಲ್ ವುಮೆನ್ ಪೊಲೀಸ್ ಠಾಣೆಗೆ ಬಂದು ಹಾಜರಾಗುವಂತೆ ನಟನಿಗೆ ನೋಟಿಸ್ ನೀಡಲಾಗಿತ್ತು.