ಬೆಂಗಳೂರು : ದಕ್ಷಿಣ ಆಫ್ರಿಕಾದಲ್ಲಿ ಹೊಸ ರೂಪಾಂತರ ಕೊರೊನಾ ತಳಿ ‘ಓಮಿಕ್ರೋನ್’ ಪತ್ತೆಯಾಗಿರುವುದು ಭಾರತ ಸೇರಿದಂತೆ ಅನೇಕ ದೇಶಗಳ ನಿದ್ದೆಗೆಡಿಸಿದೆ. ಇದೀಗ ಅಲ್ಲಿಂದ ಬೆಂಗಳೂರಿಗೆ ಬಂದವರಲ್ಲಿ ಇಬ್ಬರಿಗೆ ಕೋವಿಡ್ ದೃಢಪಟ್ಟಿದೆ.
ಕಳೆದ ಹತ್ತು ದಿನಗಳಲ್ಲಿ 10 ದೇಶಗಳಿಂದ 584 ಜನ ಬಂದಿದ್ದಾರೆ. ಅವರಲ್ಲಿ ದಕ್ಷಿಣ ಆಫ್ರಿಕಾದಿಂದ 94 ಜನ ಪ್ರಯಾಣಿಕರು ಬೆಂಗಳೂರಿಗೆ ಆಗಮಿಸಿದ್ದಾರೆ. ಅವರ ಪೈಕಿ ಇಬ್ಬರಲ್ಲಿ ಕೊರೊನಾ ಸೊಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಇಬ್ಬರನ್ನು ಕ್ವಾರಂಟೈನ್ ಮಾಡಿ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಡಿಸಿ ಶ್ರೀನಿವಾಸ್ ತಿಳಿಸಿದ್ದಾರೆ.
ಹೊಸ ತಳಿಯ ವೈರಸ್ ಕಂಡು ಬಂದಿರುವುದರ ಬಗ್ಗೆ ಖಚಿತ ಮಾಹಿತಿ ಇನ್ನೂ ಲಭ್ಯವಾಗಿಲ್ಲ.










