ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮೂರು ಕೊರೋನಾ ಪಾಸಿಟಿವ್…

148
firstsuddi

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಮತ್ತೆ ಮೂರು ಮಂದಿಯಲ್ಲಿ ಕೊರೋನಾ ವೈರಸ್ ಪಾಸಿಟಿವ್ ವರದಿಯಾಗಿದೆ. ರೋಗಿ ಸಂಖ್ಯೆ ಪಿ 578 ರ ಸಂಪರ್ಕದಲ್ಲಿದ್ದಂತಹ ಬಂಟ್ವಾಳದ 30 ವರ್ಷದ ಯುವಕ, 70 ಮತ್ತು 60 ವರ್ಷದ ಮಹಿಳೆಯ ಗಂಟಲು ದ್ರವ ಪರೀಕ್ಷೆ ವರದಿ ಸ್ವೀಕೃತವಾಗಿದ್ದು, ಇವರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿರುತ್ತದೆ. ಇವರಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ.