ದಕ ಜಿಲ್ಲೆಯಲ್ಲಿ ಕೋರೊನಾ ಸೋಂಕಿಗೆ ಮತ್ತೊಂದು ಬಲಿ – 57 ವರ್ಷದ ಮಹಿಳೆ ಸಾವು…

152
firstsuddi

ಮಂಗಳೂರು : ಮಹಾಮಾರಿ ಕೊರೋನಾ ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದ್ದು ಈ ವರೆಗೆ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 10 ಕ್ಕೇರಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಉಳ್ಳಾಲದ ಮಹಿಳೆಗೆ ಕೊರೋನ ಪಾಸಿಟಿವ್ ಆಗಿದ್ದು, ಅವರು ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

ಉಳ್ಳಾಲದ 57 ವರ್ಷದ ಮಹಿಳೆಯನ್ನು ಅನಾರೋಗ್ಯದ ಕಾರಣದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, 8 ದಿನಗಳ ಕಾಲ ಚಿಕಿತ್ಸೆ ಪಡೆದಿದ್ದರು. ಈ ವೇಳೆ ಅವರ ಗಂಟಲ ದ್ರವ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿ ಕೊರೋನ ಪಾಸಿಟಿವ್ ಬಂದಿತ್ತು. ಅವರು ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.