ದತ್ತಜಯಂತಿ : ಮನೆ ಮನೆಗೆ ತೆರಳಿ ಸಿ.ಟಿ ರವಿ ಭಿಕ್ಷಾಟನೆ…

72
firstsuddi

ಚಿಕ್ಕಮಗಳೂರು : ದತ್ತ ಜಯಂತಿ ಹಿನ್ನೆಲೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಇಂದು ನಗರದಲ್ಲಿ ಭಿಕ್ಷಾಟನೆ ಮೂಲಕ ಪಡಿ ಸಂಗ್ರಹಿಸಿದ್ದಾರೆ.

ನಗರದ ನಾರಾಯಣಪುರ, ರಾಘವೇಂದ್ರ ಮಠದ ರಸ್ತೆ, ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿ ಭಿಕ್ಷಾಟನೆ ಮೂಲಕ ಮಾಲಾಧಾರಿಗಳಿಂದ ಪಡಿ ಸಂಗ್ರಹ ಮಾಡಿದ್ದಾರೆ. ನಾಳೆ ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತಜಯಂತಿ ಅದ್ಧೂರಿಯಾಗಿ ನಡೆಯಲಿದ್ದು, ನಾಳೆ ಇರುಮುಡಿ ರೂಪದಲ್ಲಿ ದತ್ತಾತ್ರೇಯ ಸ್ವಾಮಿಗೆ ಇದನ್ನು ಅರ್ಪಿಸಲಿದ್ದಾರೆ.

ಇಂದು ಮಧ್ಯಾಹ್ನ ನಗರದಲ್ಲಿ 30 ಸಾವಿರ ಭಕ್ತರಿಂದ ಬೃಹತ್ ಶೋಭಾಯಾತ್ರೆ ನಡೆಯಲಿದ್ದು, ಖಾಕಿ ಪಡೆ ಜಿಲ್ಲಾದ್ಯಂತ ಹೈ ಅಲರ್ಟ್ ಘೋಷಿಸಿದೆ.