ದರೋಡೆಗೆ ಬಂದಿದ್ದ ದುಷ್ಕರ್ಮಿಯಿಂದ ನಟ ಸೈಫ್ ಅಲಿಖಾನ್‍ಗೆ ಚಾಕು ಇರಿತ.

39

ಮುಂಬೈ: ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ದುಷ್ಕರ್ಮಿಗಳು ಚಾಕುವುನಿಂದ ದಾಳಿ ಮಾಡಲಾಗಿದ್ದು, ಅವರನ್ನು ಮುಂಬೈ ನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀಮಂತ ನಟ ಎಂಬ ಕಾರಣಕ್ಕೆ ಕೆಲವರು ಅವರ ಮನೆಗೆ ಕನ್ನ ಹಾಕಲು ಪ್ರಯತ್ನಿಸಿದ್ದಾರೆ. ಈ ವೇಳೆ ಸೈಫ್ ಅಲಿ ಖಾನ್ ಅವರು ತಡೆಯಲು ಪ್ರಯತ್ನಿಸಿದ್ದಾರೆ. ಆಗ ಅವರಿಗೆ ಗಾಯ ಆಗಿದೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಸೈಫ್ ಅಲಿ ಖಾನ್ ಅವರು ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಮನೆಯಲ್ಲಿ ಕುಟುಂಬದವರ ಜೊತೆ ಮಲಗಿದ್ದರು. ಇಂದು ಮುಂಜಾನೆ 2.30ರ ವೇಳೆಗೆ ಕಳ್ಳರು ಮನೆ ಒಳಗೆ ನುಗ್ಗಿದ್ದಾರೆ. ಈ ವೇಳೆ ಎಲ್ಲರಿಗೂ ಎಚ್ಚರ ಆಗಿದೆ. ಆಗ ಸೈಫ್ ಅವರು ಕಳ್ಳರನ್ನು ತಡೆಯಲು ಹೋಗಿದ್ದು, ಈ ವೇಳೆ ಕಳ್ಳರು ಹಲ್ಲೆ ಮಾಡಿದ್ದಾರೆ. ತಕ್ಷಣ ಕಳ್ಳರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಕಳ್ಳರನ್ನು ಹಿಡಿಯುವ ಪ್ರಯತ್ನ ನಡೆಯುತ್ತಿದೆ. ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದ್ದು, ವಿಶೇಷ ಪೊಲೀಸರ ತಂಡ ರಚನೆ ಆಗಿದೆ. ಮನೆ ಹಾಗೂ ಸುತ್ತಮುತ್ತ ಇರುವ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ಮಾಡಲಾಗುತ್ತಿದೆ. ಸೈಫ್ ಅವರಿಗೆ 2 ಕಡೆ ಚಾಕುವಿನಿಂದ ಆಳವಾಗಿ ಇರಿಯಲಾಗಿದೆ. ಬೆನ್ನುಮೂಳೆ ಸೇರಿದಂತೆ 6 ಭಾಗಗಳಲ್ಲಿ ಗಾಯಗಳಾಗಿವೆ. ಮನೆಯಲ್ಲಿದ್ದವರು ಎಚ್ಚರಗೊಂಡ ಬಳಿಕ ದರೋಡೆಕೋರ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ವಿವರಿಸಿದ್ದಾರೆ. ಸೈಫ್ ಅಲಿ ಖಾನ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.