ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಮನೀಷ್ ಪಾಂಡೆ…

288
firstsuddi

ಮುಂಬೈ : ಭಾರತ ತಂಡದ ಕ್ರಿಕೆಟ್ ಆಟಗಾರ ಮನೀಷ್ ಪಾಂಡೆ ಅವರು ಇಂದು ನಟಿ ಆಶ್ರಿತಾ ಶೆಟ್ಟಿ ಅವರನ್ನು ವಿವಾಹವಾಗಿದ್ದಾರೆ. ಮುಂಬೈನಲ್ಲಿ ನಡೆದ ವಿವಾಹ ಸಮಾರಂಭದ ಫೋಟೋಗಳು ಈಗಾ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನಿನ್ನೆ ರಾತ್ರಿ ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ತಂಡವನ್ನು ಗೆಲ್ಲಿಸಿದ್ದ ಮನೀಷ್ ಪಾಂಡೆ ಅವರು ಟೂರ್ನಿ ಗೆಲುವಿನ ಮರುದಿನವೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಡಬಲ್ ಸಂತೋಷದಲ್ಲಿದ್ದಾರೆ. ನಟಿ ಆಶ್ರಿತಾ ಶೆಟ್ಟಿ ಅವರು 2012ರಲ್ಲಿ ತುಳುವಿನ  ‘ತೆಲಿಕೆದ ಬೊಳ್ಳಿ’ ತುಳು ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಆಶ್ರಿತಾ ‘ಇಂದ್ರಜಿತ್’, ‘ಒರು ಕಣ್ಣಿಯುನ್ ಮೂನು ಕಲಾವಾನಿಕಲಂ’, ‘ಉದಯಂ ಎನ್.ಎಚ್4’ ಸೇರಿದಂತೆ ಹಲವು ಚಿತಗಳಲ್ಲಿ ನಟಿಸಿದ್ದಾರೆ.