ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 2 ಕೋಟಿ ರೂ. ಜಪ್ತಿ…

59
firstsuddi

ಬೆಳಗಾವಿ: ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಎರಡು ಕೋಟಿ ರೂ. ನಗದು ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ತಾಲೂಕಿನ ಹಿರೇಬಾಗೇವಾಡಿ ಟೋಲ್ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಕೋಟಿ ಹಣವನ್ನ ಜಪ್ತಿ ಮಾಡಿದ್ದಾರೆ. ಮುಂಬೈನಿಂದ ಬೆಂಗಳೂರಿಗೆ ಹೊರಟಿದ್ದ ಕೆಎ 70 1459 ಸಂಖ್ಯೆಯ ಖಾಸಗಿ ಬಸ್ಸನ್ನು ಬೆಳಗಿನ ಜಾವ 3.30ರ ಸುಮಾರಿಗೆ ತಪಾಸಣೆ ನಡೆಸಿದ ವೇಳೆ ಅಕ್ರಮ ಹಣ ಪತ್ತೆಯಾಗಿದೆ.

ಈ ಕುರಿತು ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪೊಲೀಸರ ಕಾರ್ಯಕ್ಕೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.