ದಾವಣಗೆರೆಯಲ್ಲಿ ಭೀಕರ ಅಪಘಾತ – ಮೂವರು ಯುವಕರು ಸಾವು…

42
firstsuddi

ದಾವಣಗೆರೆ : ಅಪರಿಚಿತ ವಾಹನವೊಂದು ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆಯ ಆನಗೋಡು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ದಾವಣಗೆರೆ ನಗರದ ರಾಮನಗರ ನಿವಾಸಿಗಳಾದ ಪರಶುರಾಮ್ (24) ಸಂದೇಶ (23) ಶಿವು (26) ಮೃತರು. ದಾವಣಗೆರೆ ತಾಲೂಕಿನ ಕಾಟಿಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ ದೇವಿ ಕಾರ್ಯಕ್ಕೆ ತೆರಳಿ ಊಟ ಮುಗಿಸಿಕೊಂಡು ಬೈಕ್ ನಲ್ಲಿ ವಾಪಸ್ಸು ಮನೆಗೆ ಬರುವಾಗ ಹಿಂದೆಯಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಮೂವರು ಯುವಕರು ಸಾವನ್ನಪ್ಪಿದ್ದಾರೆ.

ಯುವಕರ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದ್ದು, ಕುಟುಂಬಸ್ಥರ ಹಾಗೂ ಸ್ನೇಹಿತರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.