ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲೂಕಿನ ಫಲವನಹಳ್ಳಿ ಅರಣ್ಯ ಪ್ರದೇಶದಲ್ಲಿ 32 ನಾಡಬಾಂಬ್‍ಗಳು ಪತ್ತೆಯಾಗಿವೆ. ಉಪವಲಯ ಅರಣ್ಯಾಧಿಕಾರಿ ಬರ್ಕತ್ ಅಲಿಯವರು ಗಸ್ತು ತಿರುಗುವ ವೇಳೆ ನಾಡ ಬಾಂಬ್‍ಗಳು ಪತ್ತೆಯಾಗಿದೆ. ನಾಡಬಾಂಬ್‍ಗಳನ್ನು ಕಾಡು ಪ್ರಾಣಿಗಳನ್ನು ಬೇಟೆಯಾಡಲು ಇರಿಸಲಾಗಿತ್ತು ಎಂದು ಮಾಹಿತಿ ತಿಳಿದುಬಂದಿದೆ. ಸಿಬ್ಬಂದಿ ಗಸ್ತು ತಿರುಗುತ್ತಾ ಆ ಸ್ಥಳಕ್ಕೆ ತೆರಳುತ್ತಿದ್ದಂತೆ 4 ಜನ ಆರೋಪಿಗಳು ಬೈಕ್‍ಗಳನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2 ಬೈಕ್ ಹಾಗೂ 32 ನಾಡಬಾಂಬ್‍ಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ನ್ಯಾಮತಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿ ತಿಳಿದುಬಂದಿದೆ. ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.










