ದಿ. ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿಗೆ ಕೊರೊನಾ ದೃಢ…

119
firstsuddi

ಬೆಳಗಾವಿ : ದಿ. ಸುರೇಶ ಅಂಗಡಿಯವರ ಪತ್ನಿ ಹಾಗೂ ಲೋಕಸಭಾ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಯವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಕುರಿತು ಫೇಸ್ ಬುಕ್ ನಲ್ಲಿ ಪ್ರಕಟಿಸಿರುವ ಮಂಗಳಾ ಅಂಗಡಿಯವರು, ನನಗೆ ಕೋವಿಡ್ ಗುಣಲಕ್ಷಣಗಳು ಇಲ್ಲದಿದ್ದರೂ ಕೊರೊನಾ ಪಾಸಿಟಿವ್ ಬಂದಿದೆ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಕೇಂದ್ರ ರೈಲ್ವೆ ಸಚಿವರಾಗಿದ್ದ ದಿ. ಸುರೇಶ್ ಅಂಗಡಿಯವರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದರು. ಇದೀಗ ಅವರ ಪತ್ನಿಗೆ ಕೊರೊನಾ ಸೋಂಕು ತಗುಲಿದೆ.