ದುಬೈನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಯುವತಿ ಸಾವು…

41
firstsuddi

ಮಂಗಳೂರು: ದುಬೈನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನಗರದ ಉಳ್ಳಾಲ ಮೂಲದ ಯುವತಿ ಮೃತಪಟ್ಟಿದ್ದಾರೆ.

ಉಳ್ಳಾಲ ತಾಲೂಕಿನ ಕೋಟೆಕಾರ್ ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ವಿಧಿವಶರಾದ ದುರ್ದೈವಿ. ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿಯಾಗಿರುವ ವಿದಿಶಾ, ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕಾರ್ಯ ನಿರ್ವಹಿಸಿದ್ದರು.

2019ರಲ್ಲಿ ದುಬೈಗೆ ತೆರಳಿ ಅಲ್ಲಿನ ಏರ್‌ಪೋರ್ಟ್ ನಲ್ಲಿ ಅಧಿಕಾರಿಯಾಗಿ ಕಳೆದ ಐದು ವರ್ಷಗಳಿಂದ ಕಾರ್ಯನಿರ್ವಹಿಸಿದ್ದರು. ಪ್ರತೀ ದಿನ ಕಂಪೆನಿಯ ಕ್ಯಾಬ್‍ನಲ್ಲಿ ಸಂಚರಿಸುತ್ತಿದ್ದ ವಿದಿಶಾ, ನಿನ್ನೆ ತಡವಾಯಿತು ಎಂದು ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ವಿದಿಶಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರತಿಭಾನ್ವಿತರಾಗಿದ್ದ ವಿದಿಶಾ ವಿದ್ಯಾರ್ಥಿದೆಸೆಯಲ್ಲೇ ರೋಟರ್ಯಾಕ್ಟ್ ಸೇರಿದಂತೆ ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದರು.