ಮಂಗಳೂರು: ಕೊರೊನಾ ಶಂಕೆ ಹಿನ್ನೆಲೆಯಲ್ಲಿ ನಗರದ ವೆನ್ಲಾಕ್ ಆಸ್ಪತ್ರೆಯ ವಿಶೇಷ ಘಟಕಕ್ಕೆ ದಾಖಲಿಸಲಾಗಿದ್ದ ವ್ಯಕ್ತಿ ಇದೀಗ ಆಸ್ಪತ್ರೆಯಿಂದ ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ. “ದುಬೈನಿಂದ ಆಗಮಿಸಿದ ಪ್ರಯಾಣಿಕರಿಗೆ ಜ್ವರ ಮತ್ತು ಶೀತವಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ, ವಿಮಾನ ನಿಲ್ದಾಣದ ಅಧಿಕಾರಿಗಳು ಅವರನ್ನು ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ಕಳುಹಿಸಿದರು. ಆದರೆ ಎಲ್ಲಾ ಪರೀಕ್ಷೆಗಳಿಗೆ ಒಳಗಾದ ನಂತರ, ಅವರು ಕರೋನಾ ವೈರಸ್ ಇಲ್ಲ ಎನ್ನುವುದು ಧೃಡಪಟ್ಟಿದೆ. ಎಲ್ಲೆಡೆ ಕೊರೋನ ಸೋಂಕು ಕುರಿತು ಭಯ ಇರುವ ಹಿನ್ನೆಲೆಯಲ್ಲಿ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲ ಪ್ರಯಾಣಿಕರನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ಅದರಂತೆ ನಿನ್ನೆ ದುಬೈನಿಂದ ಆಗಮಿಸಿದ ಪ್ರಯಾಣಿಕನೋರ್ವನಲ್ಲಿ ಜ್ವರದ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಆತನನ್ನು ವೆನ್ಲಾಕ್ ಆಸ್ಪತ್ರೆಯ ವಿಶೇಷ ಘಟಕಕ್ಕೆ ದಾಖಲಿಸಿದ್ದು ಆದರೆ ಜ್ವರಬಾಧಿತ ವ್ಯಕ್ತಿಯು ಆಸ್ಪತ್ರೆಯಿಂದ ಬಲವಂತವಾಗಿ ‘ಹೊರ’ ಹೋಗಿರುವುದಾಗಿ ಹೇಳಲಾಗಿದೆ. ಈ ಕುರಿತು ಆರೋಗ್ಯಾಧಿಕಾರಿ ಕೂಡಲೇ ಮಂಗಳೂರು ಉತ್ತರ ಪೊಲೀಸ್ ಠಾಣೆಗೆ ಕರೆ ಮಾಡಿ ದೂರು ನೀಡಿದ್ದಾರೆ. ಇದರಿಂದ ಎಚ್ಚೆತ್ತ ಪೊಲೀಸರು ಮಂಗಳೂರು ಆಸ್ಪತ್ರೆಯಿಂದ ಪರಾರಿ ಆದ ವ್ಯಕ್ತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ