ಬೆಂಗಳೂರು : ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸೇರಿದಂತೆ ಹಲವು ನಾಯಕರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ರಾಜ್ಯದಲ್ಲಿ ಪಕ್ಷ ಸಂಘಟನೆ ಹಾಗೂ ಮುಂಬರುವ ಚುನಾವಣೆಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಒಂದಷ್ಟು ಸಲಹೆ ನೀಡುವ ಉದ್ದೇಶದಿಂದ ಪಕ್ಷದ ಹೈಕಮಾಂಡ್ ನಾಯಕರು ಇಂದಿನ ಸಭೆಗೆ ಆಹ್ವಾನಿಸಿದ್ದಾರೆ.
ರಾಜ್ಯದಲ್ಲಿ ಪಕ್ಷ ಸಂಘಟನೆ, ಮುಂದಿನ ಹೋರಾಟ, ನಾಯಕತ್ವ, ಮುಂಬರುವ ಚುನಾವಣೆ ಹೀಗೆ ಎಲ್ಲಾ ವಿಚಾರಗಳ ಬಗ್ಗೆ ಸಭೆಯಲ್ಲಿ ಮುಕ್ತ ಚರ್ಚೆ ನಡೆಯಲಿದೆ. ಇಂದು ನಡೆಯುವ ಸಭೆಯು ರಾಜ್ಯದ ಮುಂದಿನ ಕೈ ನಾಯಕತ್ವದ ದಿಕ್ಸೂಚಿ ಆಗುವ ಸಾಧ್ಯತೆ ಇದೆ.










