ದೆಹಲಿಯಲ್ಲಿ ಭೂಕಂಪನ – ಭಯಭೀತರಾದ ಜನ…

52
firstsuddi

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ.

ರಾಷ್ಟ್ರೀಯ ಭೂಕಂಪನ ಕೇಂದ್ರದ ಪ್ರಕಾರ, ಭೂಕಂಪನದ ಕೇಂದ್ರಬಿಂದುವನ್ನು ನೆರೆಯ ನೇಪಾಳದಲ್ಲಿ ಗುರುತಿಸಲಾಗಿದೆ. ನೇಪಾಳದಲ್ಲಿ 5.4 ತೀವ್ರತೆಯ ಭೂಕಂಪ ಉಂಟಾಗಿದೆ.

ವರದಿಗಳ ಪ್ರಕಾರ ದೆಹಲಿಯಲ್ಲಿ ಇಂದು ಮಧ್ಯಾಹ್ನ 2:30ರ ವೇಳೆಗೆ ಭೂಕಂಪನದ ಅನುಭವವಾಗಿದೆ. ಜನರು ಭಯಭೀತರಾಗಿ ಮನೆ, ಕಚೇರಿಗಳಿಂದ ಹೊರಗೆ ಓಡಿಬಂದಿದ್ದಾರೆ. ಸದ್ಯ ಇಲ್ಲಿಯವರೆಗೆ ಯಾವುದೇ ಜೀವ ಅಥವಾ ಆಸ್ತಿಪಾಸ್ತಿ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ.

ದೆಹಲಿ ಹೊರತುಪಡಿಸಿ ಉತ್ತರಾಖಂಡದ ರಾಜಧಾನಿ ಡೆಹ್ರಾಡೂನ್, ಪಿಥೋರ್ಗಢ್ ಹಾಗೂ ಅಲ್ಮೋರಾ ಸೇರಿದಂತೆ ಇತರ ಜಿಲ್ಲೆಗಳಲ್ಲೂ ಕಂಪನದ ಅನುಭವವಾಗಿರುವುದಾಗಿ ವರದಿಯಾಗಿದೆ.