ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದೆ. ಹೀಗಾಗಿ ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು, ನಿಯಮ ಉಲ್ಲಂಘಿಸುವವರಿಗೆ 500 ರೂಪಾಯಿ ದಂಡ ವಿಧಿಸಲಾಗುವುದು ಎಂದು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಇಂದು ಸಭೆಯಲ್ಲಿ ನಿರ್ಧರಿಸಿದೆ.
ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವು ಶಾಲೆಗಳನ್ನು ಮುಚ್ಚದಿರಲು ನಿರ್ಧರಿಸಿದೆ. ಆದರೆ ತಜ್ಞರೊಂದಿಗೆ ಸಮಾಲೋಚಿಸಿ ಶಾಲೆಗಳಿಗೆ ಪ್ರತ್ಯೇಕ ಕೋವಿಡ್ ನಿಯಮಗಳನ್ನು ಜಾರಿಗೆ ತರಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಇಂದು ದೆಹಲಿಯಲ್ಲಿ 632 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ದೆಹಲಿಯಲ್ಲಿ ಪಾಸಿಟಿವ್ ಪ್ರಮಾಣ ಶೇಕಡಾ 4.42ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.










