ದೆಹಲಿಯಲ್ಲಿ ಶ್ರದ್ಧಾ ಹತ್ಯೆ ರೀತಿ ಮತ್ತೊಂದು ಪ್ರಕರಣ – ಪತಿಯನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟ ಪತ್ನಿ!

35
firstsuddi

ನವದೆಹಲಿ : ಶ್ರದ್ಧಾ ವಾಕರ್ ಹತ್ಯೆ ಪ್ರಕರಣದಂತೆ ಪೂರ್ವ ದೆಹಲಿಯ ಪಾಂಡವ್ ನಗರದಲ್ಲಿ ಮತ್ತೊಂದು ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಪತ್ನಿ ತನ್ನ ಪುತ್ರನೊಂದಿಗೆ ಸೇರಿಕೊಂಡು ಗಂಡನನ್ನೇ ಕೊಲೆ ಮಾಡಿ, ಬಳಿಕ ದೇಹವನ್ನು 22 ತುಂಡುಗಳಾಗಿ ಕತ್ತರಿಸಿರುವ ಆರೋಪ ಕೇಳಿಬಂದಿದೆ. ಈ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ.

ಆರೋಪಿಗಳಾದ ಪೂನಂ ಮತ್ತು ಆಕೆಯ ಮಗ ದೀಪಕ್ ಜೂನ್ ನಲ್ಲಿ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಅಂಜನ್ ದಾಸ್ ಅವರನ್ನು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತಾಯಿ ಮತ್ತು ಮಗ ಇಬ್ಬರೂ ಅಂಜನ್ ದಾಸ್ ಗೆ ಮೊದಲು ಅಮಲು ಮಾತ್ರೆಗಳನ್ನು ತಿನ್ನಿಸಿ, ನಂತರ ಕೊಂದಿದ್ದಾರೆ. ಕೊಂದ ನಂತರ ಮೃತದೇಹವನ್ನು 22 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟಿದ್ದರು. ಯಾರಿಗೂ ಅನುಮಾನ ಬರದಂತೆ ಪಾಂಡವ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೂತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ ಪೊಲೀಸರು ಸದ್ಯ ಆರೋಪಿಗಳಾದ ಪೂನಂ ಮತ್ತು ದೀಪಕ್ ಇಬ್ಬರನ್ನೂ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.