ನವದೆಹಲಿ : ದೆಹಲಿಯ ಮಾಜಿ ಮುಖ್ಯಮಂತ್ರಿ ಶೀಲಾ ಧೀಕ್ಷಿತ್(81) ಅವರು ಇಂದು ನಿಧನರಾಗಿದ್ದು, ಅನಾರೋಗ್ಯದ ಹಿನ್ನೆಲೆ ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶೀಲಾ ದೀಕ್ಷಿತ್ ಅವರು 3 ಬಾರಿ ದೆಹಲಿಯ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದು, 2014ರಲ್ಲಿ 6ತಿಂಗಳ ಕಾಲ ಕೇರಳದ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸಿದರು.










