ದೆಹಲಿ : ಇಂದಿನಿಂದ ಒಂದು ವಾರ ಲಾಕ್ ಡೌನ್ : ಸಿಎಂ ಕೇಜ್ರಿವಾಲ್.

171
firstsuddi

ನವದೆಹಲಿ: ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆ ರಾಷ್ಟ್ರ ರಾಜಧಾನಿಯಲ್ಲಿ ಇಂದಿನಿಂದ ಮುಂದಿನ ಸೋಮವಾರದ ಬೆಳಗ್ಗೆಯವರೆಗೂ ಸಂಪೂರ್ಣ ಲಾಕ್ ಡೌನ್ ವಿಧಿಸಿ ದೆಹಲಿ ಸರ್ಕಾರ ಆದೇಶ ಹೊರಡಿಸಿದೆ.

ಇಂದು ರಾತ್ರಿ 10 ಗಂಟೆಯಿಂದ ಏಪ್ರಿಲ್ 26ರ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಲಾಕ್ ಡೌನ್ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ರೊಂದಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಸಿಎಂ ಕೇಜ್ರಿವಾಲ್ ಅವರು ಸ್ಪಷ್ಟಪಡಿಸಿದ್ದಾರೆ.

ಆಹಾರ, ವೈದ್ಯಕೀಯ ಸೇವೆಗಳು ಸೇರಿದಂತೆ ಅಗತ್ಯ ಸೇವೆಗಳು ಮುಂದುವರಿಯಲಿದ್ದು, ಉಳಿದ ಎಲ್ಲ ಸೇವೆಗಳು ಲಾಕ್ ಡೌನ್ ಅವಧಿಯಲ್ಲಿ ಬಂದ್ ಆಗಲಿವೆ. ಇದೊಂದು ಸಣ್ಣ ಲಾಕ್ ಡೌನ್. ದೆಹಲಿ ಬಿಟ್ಟು ಹೊರಹೋಗಬೇಡಿ, ಇದು ಕೇವಲ 6 ದಿನಗಳವರೆಗೆ ಮಾತ್ರ. ಸರ್ಕಾರ ನಿಮ್ಮನ್ನು ನೋಡಿಕೊಳ್ಳುತ್ತದೆ ಎಂದು ವಲಸೆ ಕಾರ್ಮಿಕರಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಮನವಿ ಮಾಡಿದ್ದಾರೆ.