ದೆಹಲಿ ಕೋರ್ಟ್ ಆವರಣದೊಳಗೆ ಗುಂಡಿನ ದಾಳಿ – ಮಹಿಳೆಗೆ ಗಂಭೀರ ಗಾಯ…

49
firstsuddi

ನವದೆಹಲಿ : ದೆಹಲಿಯ ಸಾಕೇತ್ ಜಿಲ್ಲಾ ನ್ಯಾಯಾಲಯದ ಆವರಣದೊಳಗೆ ನಡೆದ ಗುಂಡಿನ ದಾಳಿಯಲ್ಲಿ ಮಹಿಳೆಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಹಣಕಾಸಿನ ವಿವಾದಕ್ಕೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಮಹಿಳೆ ಹಾಜರಾಗಿದ್ದಳು. ಈ ವೇಳೆ ವಕೀಲನಂತೆ ವೇಷ ಧರಿಸಿದ್ದ ವ್ಯಕ್ತಿಯೊಬ್ಬ ಆಕೆಯ ಮೇಲೆ ಗುಂಡು ಹಾರಿಸಿದ್ದಾನೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆಯನ್ನು ಅಲ್ಲಿದ್ದ ಪೊಲೀಸರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ.

ಗುಂಡಿನ ದಾಳಿಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.