ದೆಹಲಿ ಚುನಾವಣೆಯಲ್ಲಿ ಸಿಎಂ ಅತಿಶಿಗೆ ಗೆಲುವು.

26

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಲ್ಕಾಜಿ ಕ್ಷೇತ್ರದಲ್ಲಿ ಹಾಲಿ ಸಿಎಂ ಅತಿಶಿ ಗೆಲುವು ಸಾಧಿಸಿದ್ದಾರೆ. ಕಲ್ಕಾಜಿ ಕ್ಷೇತ್ರವು ಯಾರ ಪಾಲಾಗಲಿದೆ ಎಂಬುದು ಕೊನೆ ವರೆಗಿನ ಕುತೂಹಲವಾಗಿತ್ತು. ಮತ ಎಣಿಕೆಯಲ್ಲಿ ಬಿಜೆಪಿ ಮತ್ತು ಎಎಪಿ ನಡುವೆ ತೀವ್ರ ಪೈಪೋಟಿ ಇತ್ತು. ಆರಂಭದಲ್ಲಿ ದೆಹಲಿ ಸಿಎಂ ಅತಿಶಿ ಹಿನ್ನಡೆ ಅನುಭವಿಸಿದ್ದರು. 2020ರಲ್ಲಿ ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಅತಿಶಿ ಗೆದ್ದಿದ್ದರು. ಈ ಬಾರಿ ಬಿಜೆಪಿಯ ರಮೇಶ್ ಬಿಧುರಿ ವಿರುದ್ಧ ಜಯ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡಿದ್ದರು. ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿಯ ಭರ್ಜರಿ ಗೆಲುವು ಮತ್ತು ಆಮ್ ಆದ್ಮಿ ಪಕ್ಷದ ಉನ್ನತ ನಾಯಕರ ಆಘಾತಕಾರಿ ಸೋಲುಗಳ ಹೊರತಾಗಿಯೂ ಸಿಎಂ ಅತಿಶಿ ದಕ್ಷಿಣ ದೆಹಲಿಯ ಕಲ್ಕಾಜಿ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.