ದೆಹಲಿ ಪಾಲಿಕೆಯಲ್ಲಿ ಆಪ್‍ಗೆ ಭರ್ಜರಿ ಜಯ – 15 ವರ್ಷದ ಬಿಜೆಪಿ ಆಡಳಿತ ಅಂತ್ಯ…

71
firstsuddi

ನವದೆಹಲಿ : ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಜಯ ಸಾಧಿಸಿದೆ.

ತೀವ್ರ ಕುತೂಹಲ ಕೆರೆಳಿಸಿದ್ದ ದೆಹಲಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರದ ಗದ್ದುಗೆ ಹಿಡಿಯುವಲ್ಲಿ ಆಮ್ ಆದ್ಮಿ ಪಕ್ಷ ಯಶಸ್ವಿಯಾಗಿದ್ದು, 150ಕ್ಕೂ ಹೆಚ್ಚು ವಾರ್ಡ್ ಗಳಲ್ಲಿ ಗೆಲ್ಲುವ ಮೂಲಕ ಮೊದಲ ಬಾರಿಗೆ ಅಧಿಕಾರಕ್ಕೇರಿದೆ. ಆ ಮೂಲಕ ದೆಹಲಿಯಲ್ಲಿ 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯಗೊಂಡಿದೆ. ಮತ ಎಣಿಕೆಯ ಆರಂಭದಲ್ಲಿ ಬಿಜೆಪಿ ಮತ್ತು ಆಪ್‌ ಮಧ್ಯೆ ನೇರಾನೇರ ಸ್ಪರ್ಧೆ ಇತ್ತು. ಬಳಿಕ ಆಪ್‌ ಮುನ್ನಡೆಯನ್ನು ಕಾಯ್ದುಕೊಂಡಿತು.

ಸದ್ಯ ಆಪ್ 126 ಸ್ಥಾನಗಳಲ್ಲಿ ಗೆದ್ದು, 8 ವಾರ್ಡ್‍ಗಳಲ್ಲಿ ಮುನ್ನಡೆಯಲ್ಲಿದೆ. ಬಿಜೆಪಿ 97ರಲ್ಲಿ ಗೆದ್ದು, 6ರಲ್ಲಿ ಲೀಡ್ ಪಡೆದಿದೆ. ಕಾಂಗ್ರೆಸ್ 7 ಸ್ಥಾನ ಜಯಿಸಿ 3ರಲ್ಲಿ ಮುನ್ನಡೆ ಪಡೆದಿದೆ. ಮೂರು ವಾರ್ಡ್ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಗೆದ್ದಿದ್ದಾರೆ. ಡಿಸೆಂಬರ್‌ 4 ರಂದು ಚುನಾವಣೆ ನಡೆದಿದ್ದು 250 ಸ್ಥಾನಗಳಿರುವ ಪಾಲಿಕೆಯಲ್ಲಿ ಬಹುಮತಕ್ಕೆ 126 ಸ್ಥಾನಗಳ ಅಗತ್ಯವಿದೆ.