ದೆಹಲಿ ಲೆಫ್ಟಿನೆಂಟ್ ಜನರಲ್ ಅನಿಲ್ ಬೈಜಾಲ್ ರಾಜೀನಾಮೆ…

48
firstsuddi

ನವದೆಹಲಿ : ದೆಹಲಿ ಲೆಫ್ಟಿನೆಂಟ್ ಜನರಲ್ ಅನಿಲ್ ಬೈಜಾಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬೈಜಾಲ್ ಅವರು ವೈಯಕ್ತಿಕ ಕಾರಣ ನೀಡಿ ರಾಜೀನಾಮೆ ಪತ್ರವನ್ನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಸಲ್ಲಿಕೆ ಮಾಡಿದ್ದಾರೆಂದು ವರದಿಯಾಗಿದೆ.

ಅನಿಲ್ ಬೈಜಾಲ್ ಅವರು ಡಿಸೆಂಬರ್ 2016ರಲ್ಲಿ ದೆಹಲಿಯ ಲೆಫ್ಟಿನೆಂಟ್ ಜನರಲ್ ಆಗಿ ನೇಮಕಗೊಂಡಿದ್ದರು. 1969ರ ಐಎಎಸ್ ಅಧಿಕಾರಿ ಬೈಜಾಲ್, ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಕೇಂದ್ರ ಗೃಹ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಹಲವು ಸಚಿವಾಲಯಗಳಲ್ಲಿ ಪ್ರಮುಖ ಸ್ಥಾನಗಳನ್ನು ನಿರ್ವಹಿಸಿದ ಅನುಭವ ಹೊಂದಿದ್ದರು.