ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಜೂನ್ 13ರವರೆಗೆ ಇಡಿ ಕಸ್ಟಡಿಗೆ ಕೋರ್ಟ್ ಒಪ್ಪಿಸಿದೆ.
ಮೇ 30 ರಂದು ಜೈನ್ ಅವರನ್ನು ಇಡಿ ಬಂಧಿಸಿತ್ತು. ಬಳಿಕ ಜೂನ್. 7ರಂದು ಇಡಿ ಅಧಿಕಾರಿಗಳು ಸತ್ಯೇಂದ್ರ ಜೈನ್ ನಿವಾಸ ಸೇರಿದಂತೆ ಏಳು ಕಡೆಗಳಲ್ಲಿ ದಾಳಿ ನಡೆಸಿ ಮಹತ್ವದ ದಾಖಲೆ ವಶಕ್ಕೆ ಪಡೆದುಕೊಂಡಿತ್ತು. ದಾಳಿ ವೇಳೆ ರೂ. 2.85 ಕೋಟಿ ನಗದು ಹಾಗೂ 133 ಚಿನ್ನದ ನಾಣ್ಯಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಇಡಿ ತಿಳಿಸಿತ್ತು.
ಫೆಬ್ರವರಿ 2015 ರಿಂದ 2017ರ ನಡುವೆ ಸತ್ಯೇಂದ್ರ ಜೈನ್ ಹಾಗೂ ಅವರ ಪತ್ನಿ ತಮ್ಮ ಆದಾಯಕ್ಕಿಂತ ಹೆಚ್ಚು ರೂ. 1.47 ಕೋಟಿ ರೂಪಾಯಿಯಷ್ಟು ಅಕ್ರಮ ಆಸ್ತಿ ಸಂಪಾದನೆಯ ಆರೋಪವಿದೆ.










