ದೆಹಲಿ ಸಿಎಂ ಮನೆ ಮೇಲೆ ದಾಳಿ – 8 ಮಂದಿಯನ್ನು ಬಂಧಿಸಿದ ಪೊಲೀಸರು…

85
firstsuddi

ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನೆ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ 8 ಜನರನ್ನು ದೆಹಲಿ ಪೊಲೀಸರು ಬಂಧಿಸಿದ್ದು, ಇನ್ನೂ ಕೆಲವರ ಪತ್ತೆಗಾಗಿ ತನಿಖೆ ನಡೆಸುತ್ತಿದ್ದಾರೆ.

ನಿನ್ನೆ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿತ್ತು. ಸಿಎಂ ಮನೆ ಸುತ್ತ ಮುತ್ತಲಿನ ಸಿಸಿಟಿವಿ ಕ್ಯಾಮೆರಾ, ಭದ್ರತಾ ತಡೆಗೋಡೆಗಳು ಧ್ವಂಸವಾಗಿದೆ.

ಇತ್ತೀಚೆಗೆ ದೆಹಲಿ ಅಸೆಂಬ್ಲಿಯಲ್ಲಿ ಮಾಡಿದ ಭಾಷಣದಲ್ಲಿ, ಕೇಜ್ರಿವಾಲ್ ಅವರು ಕಾಶ್ಮೀರ ಫೈಲ್ಸ್ ವಿಚಾರ ಮಾತನಾಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಹಿನ್ನಲೆ ಅವರ ನಿವಾಸದ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಭದ್ರತಾ ತಡೆಗೋಡೆ ಹಾಗೂ ಸಿಸಿಟಿವಿ ಕ್ಯಾಮೆರಾಗಳು ಧ್ವಂಸಗೊಂಡಿದೆ ಎಂಬ ಆರೋಪ ಕೇಳಿ ಬಂದಿದೆ.