ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರು ಕರ್ನಾಟಕ ಸರ್ಕಾರದ ಬಗ್ಗೆ ಮಾತಾಡೋ ಬದಲು ರಾಜ್ಯಕ್ಕೆ ಅನ್ಯಾಯ ಆಗಿರೋ ಬಗ್ಗೆ ಸಂಸತ್‍ನಲ್ಲಿ ಮಾತನಾಡಲಿ ಎಂದು ಸಚಿವ ಕೃಷ್ಣ ಬೈರೇಗೌಡ ದೇವೇಗೌಡರಿಗೆ ತಿರುಗೇಟು ಕೊಟ್ಟಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಸಭೆಯಲ್ಲಿ ಮಾತಾಡಿದ್ದ ದೇವೇಗೌಡರ ಮಾತಿಗೆ ಪ್ರತಿಕ್ರಿಯೆ ನೀಡಿದ ಅವರು, ದೇವೇಗೌಡರು ಸಂಸತ್‍ನಲ್ಲಿ ಮಾತನಾಡಬೇಕಿರೋದು ರಾಜ್ಯಕ್ಕೆ ಕೇಂದ್ರ ಸರ್ಕಾರ ಮಾಡಿರೋ ಅನ್ಯಾಯದ ಬಗ್ಗೆ. ಹೆಜ್ಜೆ ಹೆಜ್ಜೆಗೂ ಕರ್ನಾಟಕಕ್ಕೆ ಅನ್ಯಾಯ ಆಗುತ್ತಿದೆ. ಕೇಂದ್ರ ಸರ್ಕಾರದ ಬಜೆಟ್ ಕರ್ನಾಟಕಕ್ಕೆ ಕರಾಳ ಅಧ್ಯಾಯ ಆಗಿದೆ. ತೆರಿಗೆ ಕಟ್ಟುವ, ಕಷ್ಟಪಟ್ಟು ದುಡಿಯೋ ರಾಜ್ಯ ಜನರ ತೆರಿಗೆ ದುಡ್ಡು ಲೂಟಿ ಆಗುತ್ತಿದೆ. ರಾಜ್ಯದ ಬಗ್ಗೆ ಇವರಿಗೆ ಬದ್ಧತೆ ಇದ್ದರೆ ಕರ್ನಾಟಕಕ್ಕೆ ಮೊದಲು ಕೇಂದ್ರದಿಂದ ನ್ಯಾಯ ಕೊಡಿಸಲಿ. ಅದನ್ನ ಬಿಟ್ಟು ಅವರು ಮಾಡೋ ಅನ್ಯಾಯವನ್ನ ಮುಚ್ಚಿಹಾಕಿ ಇವರು ಕೂಡಾ ಅನ್ಯಾಯದಲ್ಲಿ ಪಾಲಾಗೋದು ಬಿಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.










