ದೇವೇಗೌಡರ ಜನ್ಮದಿನದಂದು ಜೆಡಿಎಸ್‍ನಿಂದ ಶೀಘ್ರದಲ್ಲೇ ಬೃಹತ್ ಸಮಾವೇಶಕ್ಕೆ ನಿರ್ಧಾರ.

38

ಬೆಂಗಳೂರು: ಜೆಡಿಎಸ್ ಪಕ್ಷವು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಜನ್ಮದಿನದ ಸಂದರ್ಭದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಲು ನಿರ್ಧರಿಸಿದೆ. ಈ ಸಮಾವೇಶವನ್ನು ಹಾಸನ ಅಥವಾ ಮೈಸೂರಿನಲ್ಲಿ ನಡೆಸುವ ಯೋಜನೆ ಇದೆ. ಲಕ್ಷಾಂತರ ಜನರನ್ನು ಸೇರಿಸಿ ‘ದೇವೇಗೌಡೋತ್ಸವ’ ಆಚರಿಸಲು ನಿರ್ಧರಿಸಲಾಗಿದೆ. ಇದು ಹಾಸನದಲ್ಲಿ ಕಾಂಗ್ರೆಸ್ ಪಕ್ಷವು ನಡೆಸಿದ ಸಮಾವೇಶಕ್ಕಿಂತ ದೊಡ್ಡದಾಗಿರಲಿದೆ. ಸಮಾವೇಶಕ್ಕೆ ಸಮುದಾಯದ ಪ್ರಮುಖ ನಾಯಕರು ಮತ್ತು ದೇವೇಗೌಡರ ಅಭಿಮಾನಿಗಳನ್ನು ಪಕ್ಷಾತೀತವಾಗಿ ಆಹ್ವಾನಿಸಲು ಯೋಜಿಸಲಾಗಿದೆ. ಇದರಿಂದ ಸಮುದಾಯವನ್ನು ಒಗ್ಗೂಡಿಸುವ ಉದ್ದೇಶ ಪಕ್ಷದ್ದಾಗಿದೆ. ಚನ್ನಪಟ್ಟಣ ಉಪಚುನಾವಣೆಯ ನಂತರ ಹಳೆ ಮೈಸೂರು ಭಾಗದಲ್ಲಿ ಸ್ವಲ್ಪ ಮಟ್ಟಿಗೆ ಜೆಡಿಎಸ್ ಹಿಡಿತ ತಪ್ಪಿದೆ. ದೇವೇಗೌಡೋತ್ಸವ ಬೃಹತ್ ಸಮಾವೇಶದ ಮೂಲಕ ಶಕ್ತಿಯನ್ನು ಪ್ರದರ್ಶಿಸುವುದರ ಜತೆಗೆ, ಹಳೆ ಮೈಸೂರು ಪ್ರದೇಶದಲ್ಲಿ ನೆಲೆಯಲ್ಲಿ ಗಟ್ಟಿಗೊಳಿಸುವುದು ಪಕ್ಷದ ನಾಯಕರ ಉದ್ದೇಶವಾಗಿದೆ.