ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಬರೋಬ್ಬರಿ 8,909 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,07,615ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಅಂದೇ ದಿನ 217 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 5,815ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,07,615 ಮಂದಿ ಸೋಂಕಿತರ ಪೈಕಿ 1,00,303 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನುಳಿದ 101,497 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.