ಮೈಸೂರು : ಸುದ್ದಿಗಾರರೊಂದಿಗೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಅವರು ರಾಜ್ಯದಲ್ಲಿ ಸರ್ಕಾರ ಸುಭದ್ರವಾಗಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇನ್ನೂ 4ವರ್ಷ ಆಡಳಿತ ನಡೆಸುತ್ತಾರೆ. ಹಾಗೆಯೇ ರಾಷ್ಟ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 5ವರ್ಷ ಆಡಳಿತ ನಡೆಸುತ್ತಾರೆ. ದೇಶಕ್ಕೆ ನರೇಂದ್ರ ಮೋದಿ ಅವರು ಹೇಗೋ ಹಾಗೆಯೇ ರಾಜ್ಯಕ್ಕೆ ಕುಮಾರಸ್ವಾಮಿ, ಅದನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ. ಸರ್ಕಾರ ರಚನೆಯಾದ ಆರಂಭದಲ್ಲಿ ಬಿಜೆಪಿ ಪಕ್ಷದವರು ಆಪರೇಶನ್ ಕಮಲ ಮಾಡುತ್ತಿದ್ದರು. ಆದರೆ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕರಿಸಿದ ಬಳಿಕ ಆಪರೇಶನ್ ಕಮಲ ಮಾಡುವುದನ್ನು ನಿಲ್ಲಿಸಿದ್ದಾರೆ ಎಂದು ಹೇಳಿದ್ದಾರೆ.










