ದೇಶದಲ್ಲಿ ಒಂದೇ ದಿನ 54,044 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 76,51,108ಕ್ಕೆ ಏರಿಕೆ…

94
firstsuddi

ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 54,044ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 76,51,108ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 717 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,15,914ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 76,51,108 ಮಂದಿ ಸೋಂಕಿತರ ಪೈಕಿ 67,95,103 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 7,40,090 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.