ದೇಶದಲ್ಲಿ ಒಂದೇ ದಿನ 55,722 ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 75,50,273ಕ್ಕೆ ಏರಿಕೆ…

159
firstsuddi

ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 55,722 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 75,50,273ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 579 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,14,610ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 75,50,273ಮಂದಿ ಸೋಂಕಿತರ ಪೈಕಿ 66,63,608 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 7,72,055 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.