ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 63,371 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 73,70,469ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 895 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,12,161ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 73,70,469ಮಂದಿ ಸೋಂಕಿತರ ಪೈಕಿ 64,53,780ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 8,04,528 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.










