ದೇಶದಲ್ಲಿ ಒಂದೇ ದಿನ 68,898 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 29,05,824 ಕ್ಕೆ ಏರಿಕೆ…

137
firstsuddi

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 68,898 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,05,824 ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 983 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 54,849ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 29,05,824 ಮಂದಿ ಸೋಂಕಿತರ ಪೈಕಿ 21,58,946 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನುಳಿದ 6,92,028 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.