ದೇಶದಲ್ಲಿ ಒಂದೇ ದಿನ 69,652 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 28,36,926 ಕ್ಕೆ ಏರಿಕೆ…

203
firstsuddi

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 69,652 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,36,926 ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 977 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 53,866 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 28,36,926 ಮಂದಿ ಸೋಂಕಿತರ ಪೈಕಿ 20,96,665 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನುಳಿದ 6,86,395 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.