ದೇಶದಲ್ಲಿ ಒಂದೇ ದಿನ 78,357 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 37,69,524ಕ್ಕೆ ಏರಿಕೆ…

134
firstsuddi

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 78,357 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 37,69,524ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 1045 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 66,333ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 37,69,524ಮಂದಿ ಸೋಂಕಿತರ ಪೈಕಿ 29,019,09 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 8,01,282 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.