ದೇಶದಲ್ಲಿ ಒಂದೇ ದಿನ 86,961 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 54,87,581ಕ್ಕೆ ಏರಿಕೆ…

204
firstsuddi

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 86,961 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 54,87,581ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 1,130 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 87,882ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 54,87,581ಮಂದಿ ಸೋಂಕಿತರ ಪೈಕಿ 43,96,399 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 10,03,299 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.