ದೇಶದಲ್ಲಿ ಕಳೆದ 24ಗಂಟೆಯಲ್ಲಿ 1035 ಹೊಸ ಕೊರೊನಾ ಪ್ರಕರಣ ಪತ್ತೆ, 40 ಮಂದಿ ಸಾವು…

161
firstsuddi

ನವದೆಹಲಿ : ದೇಶದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ 1,035 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 40 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7,447ಕ್ಕೆ ಏರಿಕೆಯಾಗಿದ್ದು, ಮೃತಪಟ್ಟವರ ಸಂಖ್ಯೆ 239ಕ್ಕೆ ಏರಿಕೆಯಾಗಿದೆ. 7,447 ಮಂದಿಯ ಪೈಕಿ 6,565 ಮಂದಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, 643 ಮಂದಿ ಗುಣಮುಖರಾಗಿದ್ದಾರೆ.