ದೇಶದಲ್ಲಿ ಕೊರೊನಾ ಆರ್ಭಟ-ನಿನ್ನೆ ಒಂದೇ ದಿನ 34,884 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 10,38,716ಕ್ಕೆ ಏರಿಕೆ…

136
firstsuddi

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಬರೋಬ್ಬರಿ 34,884 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10,38,716ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 671 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 26,273ಕ್ಕೆ ಏರಿಕೆಯಾಗಿದೆ. ದೇಶದಲಿ 10,38,716 ಮಂದಿ ಸೋಂಕಿತರ ಪೈಕಿ 6,53,751ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನುಳಿದ 3,58,692 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.