ದೇಶದಲ್ಲಿ ಕೊರೊನಾ ನಾಗಾಲೋಟ-ಒಂದೇ ದಿನ 52,123 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 15,83,792ಕ್ಕೆ ಏರಿಕೆ…

135
firstsuddi

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಬರೋಬ್ಬರಿ 52,123 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 15,83,792ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 654 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 33,425ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 15,83,792ಮಂದಿ ಸೋಂಕಿತರ ಪೈಕಿ 10,20,582ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನುಳಿದ 5,28,242 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.