ದೇಶದಲ್ಲಿ ನಿನ್ನೆ ಒಂದೇ ದಿನ 3320 ಹೊಸ ಕೊರೊನಾ ಪ್ರಕರಣ ಪತ್ತೆ…

161
firstsuddi

ನವದೆಹಲಿ : ದೇಸದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ದೇಶದಲ್ಲಿ ನಿನ್ನೆ ಒಂದೇ ದಿನ 3320 ಹೊಸ ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 59,662ಕ್ಕೆ ಏರಿಕೆಯಾಗಿದೆ ಹಾಗೂ 95 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಸಾವಿನ ಸಂಖ್ಯೆ 1981ಕ್ಕೆ ಏರಿಕೆಯಾಗಿದೆ. ಈ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಈಗಾ 39,834 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಸೋಂಕಿಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, 17,847 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ತಿಳಿದು ಬಂದಿದೆ.