ದೇಶದಲ್ಲಿ ನಿನ್ನೆ ಒಂದೇ ದಿನ 5,609 ಮಂದಿ ಸೋಂಕಿತರು ಪತ್ತೆ-132 ಮಂದಿ ಸಾವು…

123
firstsuddi

ನವದೆಹಲಿ : ಭಾರತದಲ್ಲಿ ಮಹಾಮಾರಿ ಕೊರೊನಾ ವೈರಸ್ ಆರ್ಭಟ ಹೆಚ್ಚಾಗಿದ್ದು, ನಿನ್ನೆ ಒಂದೇ ದಿನ ದೇಶದಲ್ಲಿ 5,609 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,12,359ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೇ ಒಂದೇ ದಿನ ದೇಶದಲ್ಲಿ 132 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 3,435ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಈವರೆಗೆ 48,735ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಉಳಿದ 63,624ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.