ದೇಶದಲ್ಲಿ ಮಂಕಿಪಾಕ್ಸ್ ಭೀತಿ – ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆ…

58
firstsuddi

ನವದೆಹಲಿ : ದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ಇದೀಗ ಕೇಂದ್ರ ಆರೋಗ್ಯ ಇಲಾಖೆ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಹೊಸ ಮಾರ್ಗಸೂಚಿಯಲ್ಲೇನಿದೆ?
ಅಂತಾರಾಷ್ಟ್ರೀಯ ಪ್ರಯಾಣಿಕರು ಅನಾರೋಗ್ಯವಿರುವ ಜನರೊಂದಿಗೆ ನಿಕಟ ಸಂಪರ್ಕ ಹೊಂದಿರಬಾರದು. ಇಲಿಗಳು, ಅಳಿಲುಗಳು, ಮಂಗಗಳು ಮತ್ತು ಸಸ್ತನಿಗಳು ಸೇರಿದಂತೆ ಸತ್ತ ಅಥವಾ ಜೀವಂತ ಕಾಡು ಪ್ರಾಣಿಗಳ ಸಂಪರ್ಕದಿಂದ ದೂರವಿರಬೇಕು. ಆಫ್ರಿಕಾ ಸೇರಿದಂತೆ ಇತರ ದೇಶಗಳಲ್ಲಿ ಕಾಡು ಪ್ರಾಣಿಗಳಿಂದ ಉತ್ಪಾದಿಸಿದ ಉತ್ಪನ್ನಗಳಾದ ಕ್ರೀಮ್ ಲೋಷನ್ ಗಳನ್ನು ಬಳಸಬಾರದು ಮತ್ತು ತರಬಾರದು. ಮಂಕಿಪಾಕ್ಸ್ ಲಕ್ಷಣಗಳು ಕಂಡುಬಂದರೆ ಕೂಡಲೇ ಹತ್ತಿರದ ಆಸ್ಪತ್ರೆಗೆ ತೆರಳಿ ಔಷಧಿ ಪಡೆಯಿರಿ ಮತ್ತು ಈ ಬಗ್ಗೆ ಸರಿಯಾಗಿ ಮಾಹಿತಿ ನೀಡಿ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ಇತ್ತೀಚೆಗೆ ವಿದೇಶದಿಂದ ಹಿಂದಿರುಗಿದ ಕೇರಳದ ಕೊಲ್ಲಂನ ವ್ಯಕ್ತಿಯೊಬ್ಬನಿಗೆ ಮಂಗನ ಕಾಯಿಲೆಯ ಲಕ್ಷಣಗಳು ಕಾಣಿಸಿಕೊಂಡಿತ್ತು. ಅತನನ್ನು ಆಸ್ಪತ್ರೆಗೆ ದಾಖಲಿಸಿ ಮಾದರಿಗಳನ್ನು ಪರೀಕ್ಷೆ ನಡೆಸಿದಾಗ ಬಳಿಕ ಸೋಂಕು ಇರುವುದು ಖಚಿತಗೊಂಡಿದೆ. ಇದೀಗ ಸೋಂಕು ಖಚಿತಗೊಂಡಂತೆ ಆ ವ್ಯಕ್ತಿಯನ್ನು ಸಂಪರ್ಕ ಹೊಂದಿದವರ ಪತ್ತೆಗೆ ಆರೋಗ್ಯ ಇಲಾಖೆ ಮುಂದಾಗಿದೆ ಎಂದು ವರದಿಯಾಗಿದೆ.