ದೇಶದಲ್ಲಿ ಮತ್ತೊಂದು ಓಮಿಕ್ರಾನ್ ಪತ್ತೆ – ದಕ್ಷಿಣ ಆಫ್ರಿಕಾದಿಂದ ಗುಜರಾತ್‍ಗೆ ಬಂದಿದ್ದ ವ್ಯಕ್ತಿಗೆ ಸೋಂಕು ದೃಢ…

76
firstsuddi

ಅಹಮದಾಬಾದ್ (ಗುಜರಾತ್) : ಇಂದು ಗುಜರಾತ್ ನಲ್ಲಿ ಓಮಿಕ್ರಾನ್ ಮೊದಲ ಪ್ರಕರಣ ದೃಢಪಟ್ಟಿದೆ. ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದ್ದ ವ್ಯಕ್ತಿಯೊಬ್ಬರಲ್ಲಿ ಓಮಿಕ್ರಾನ್ ರೂಪಾಂತರಿ ವೈರಸ್ ಪತ್ತೆಯಾಗಿದೆ.

ಜಾಮ್ ನಗರದ 72 ವರ್ಷದ ವೃದ್ಧರೊಬ್ಬರು ಇತ್ತೀಚೆಗಷ್ಟೇ ಝಿಂಬಾಬ್ವೆಯಿಂದ ಹಿಂದಿರುಗಿದ್ದರು. ಅವರಲ್ಲಿ ಓಮಿಕ್ರಾನ್ ವೈರಸ್ ಕಾಣಿಸಿಕೊಂಡಿದ್ದು, ಆತನನ್ನು ಜಾಮ್ ನಗರದ ಜೆಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಇವರು 90 ಮಂದಿಯೊಂದಿಗೆ ಸಂಪರ್ಕಕ್ಕೆ ಬಂದಿದ್ದಾರೆ ಎಂದು ತಿಳಿದುಬಂದಿದೆ.