ನವದೆಹಲಿ : ದೇಶದಲ್ಲಿ ಮಾಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಹೆಚ್ಚಾಗಿದ್ದು, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 3970 ಮಂದಿಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 85,970ಕ್ಕೆ ಏರಿಕೆಯಾಗಿದೆ. ಹಾಗೂ ನಿನ್ನೆ ಒಂದೇ ದಿನ 103 ಮಂದಿ ಸೋಂಕಿಗೆ ಬಲಿಯಾಗಿದ್ದು, ದೇಶದಲ್ಲಿ ಮೃತರ ಸಂಖ್ಯೆ 2752ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 85,940 ಮಂದಿ ಸೋಂಕಿತರ ಪೈಕಿ 30,153 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನುಳಿದ 53,035 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಕೇಮದ್ರ ಆರೋಗ್ಯ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.










