ನವದೆಹಲಿ : ದೇಶದಲ್ಲಿ ಮಹಾಮಾರಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ 3,722 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 78,003ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 134 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 2549ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ. ದೇಶದಲ್ಲಿ 78,003 ಸೋಂಕಿತರ ಪೈಕಿ 26,235 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ತಿಳಿದು ಬಂದಿದೆ.










