ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 36,370 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 79,46,429ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 488 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,19,502ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 79,46,429 ಮಂದಿ ಸೋಂಕಿತರ ಪೈಕಿ 72,01,070 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 6,25,857 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.










