ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಪ್ರಮಾಣದಲ್ಲಿ ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 29,164 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 88,74,291ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆಯೂ ಕೂಡಾ ಕಡಿಮೆಯಾಗಿದ್ದು, ನಿನ್ನೆ ಒಂದೇ ದಿನ 449 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,30,519 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 88,74,291 ಮಂದಿ ಸೋಂಕಿತರ ಪೈಕಿ ಈವರೆಗೆ 82,90,371 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 4,53,401ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.










