ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ : ಮಾ.17 ರಂದು ಎಲ್ಲಾ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಮಹತ್ವದ ಚರ್ಚೆ…

116
Firstsuddi

ನವದೆಹಲಿ : ಭಾರತದಲ್ಲಿ ಕೊರೋನಾ ವೈರಸ್ ಹೆಚ್ಚಾಗುತ್ತಲೇ ಇದ್ದು, ಈ ಬೆಳವಣಿಗೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾರ್ಚ್ 17ಕ್ಕೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಹತ್ವದ ಚರ್ಚೆ ನಡೆಸಲಿದ್ದಾರೆ.

ಮಹಾರಾಷ್ಟ್ರ, ಕೇರಳ, ಪಂಜಾಬ್, ಕರ್ನಾಟಕ ಸೇರಿ ಕೆಲ ರಾಜ್ಯಗಳಲ್ಲಿ ಕೊರೊನಾ ವೈರಸ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆ ಮಾರ್ಚ್ 17ರ ಮಧ್ಯಾಹ್ನ 12.30ಕ್ಕೆ ವಿಡಿಯೋ ಕಾನ್ಪರೆನ್ಸ್ ಮೂಲಕ ಮಹತ್ವದ ಸಭೆ ನಡೆಸಲಿದ್ದಾರೆ. ಎಲ್ಲಾ ಮುಖ್ಯಮಂತ್ರಿಗಳಿಂದ ಕೊರೊನಾ ನಿಯಂತ್ರಿಸುವ ಕ್ರಮಗಳ ಕುರಿತು ಮಾಹಿತಿ ಪಡೆಯಲಿದ್ದು, ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡುವ ಸಾಧ್ಯತೆ ಇದೆ.