ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,302 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,44,99,925ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 267 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,65,349ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,44,99,925 ಮಂದಿ ಸೋಂಕಿತರ ಪೈಕಿ ಈವರೆಗೆ 3,39,09,708 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










