ದೇಶದಲ್ಲಿ 11,109 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,47,97,269ಕ್ಕೆ ಏರಿಕೆ…

57
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,109 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,47,97,269ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 29 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,064ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,47,97,269 ಮಂದಿ ಸೋಂಕಿತರ ಪೈಕಿ ಈವರೆಗೆ 4,42,16,583 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.